ಬೆಂಗಳೂರು: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ಕರ್ನಾಟಕದ ವಿರೋಧ ಪಕ್ಷದ ನಾಯಕರನ್ನಾಗಿ ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನ ನೇಮಕ ಮಾಡಿದ್ದು, ಬಿಜೆಪಿ ಪಾಳಯದಲ್ಲಿನ ಅಸಮಾಧಾನ ಹೆಚ್ಚಾಗಿದೆ.
ಉತ್ತರ ಕರ್ನಾಟಕ ಭಾಗ ಬಿಜೆಪಿ ಹಿರಿಯ ನಾಯಕರು ಸೇರಿದಂತೆ ಬೆಂಗಳೂರು ಭಾಗವ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಅರವಿಂದ ಲಿಂಬಾವಳಿ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇತ್ತ ಬಿಜೆಪಿ ನಾಯಕರ ಮೇಲಿನ ಮುನಿಸಿನಿಂದಾಗಿ ಹಲವು ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆ ಬೆನ್ನಲ್ಲೇ ಮಾಜಿ ಶಾಸಕ ಅರವಿಂದ ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆಪಯಾಗುತ್ತಾರಾ ಎಂಬ ಚರ್ಚೆ ಹುಟ್ಟಿಕೊಂಡಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಅರವಿಂಗ ಲಿಂಬಾವಳಿಗೆ ಟಿಕೆಟ್ ಕೈ ತಪ್ಪಿತ್ತು. ಅಲ್ಲದೇ ಪಕ್ಷದ ಕಾರ್ಯಚಟುವಟಿಕೆಯಿಂದ ಬಿಜೆಪಿಯ ಕೆಲ ನಾಯಕರು ಅರವಿಂದ ಲಿಂಬಾವಳಿ ಅವರನ್ನ ದೂರ ಇಟ್ಟಿದ್ದು, ಅವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





