Breaking News

ಕಾರ್ತಿಕಮಾಸದ ತೊಟ್ಟಿಲಮಡು ಜಾತ್ರಾಮಹೋತ್ಸವವೆಂದೇ ಪ್ರಖ್ಯಾತವಾದ ”ಅಷ್ಠತೀರ್ಥೋತ್ಸವ” ಬುಧವಾರ ವೈಭವದಿಂದ ನೆರವೇರಿತು….

ಮೇಲುಕೋಟೆ: ಶ್ರೀಚೆಲುವನಾರಾಯಣಸ್ವಾಮಿಯವರ ಕಾರ್ತಿಕಮಾಸದ ತೊಟ್ಟಿಲಮಡು ಜಾತ್ರಾಮಹೋತ್ಸವವೆಂದೇ ಪ್ರಖ್ಯಾತವಾದ ”ಅಷ್ಠತೀರ್ಥೋತ್ಸವ” ಬುಧವಾರ ವೈಭವದಿಂದ ನೆರವೇರಿತು. ರಾಜಮುಡಿ ಬ್ರಹ್ಮೋತ್ಸವದ ಆರನೇ ತಿರುನಾಳ್ ಮತ್ತು ದಶಮಿತಿಥಿ ಕೂಡಿದ ವಿಶೇಷ ದಿನದಂದು ಶ್ರೀಚೆಲುವನಾರಾಯಣನ ಬಂಗಾರದ ಪಾದುಕೆಗೆ ಪಂಚಕಲ್ಯಾಣಿ, ವೈಕುಂಠಗಂಗೆ ಹಾಗೂ ಎಲ್ಲಾ ಎಂಟು ತೀರ್ಥಗಳಲ್ಲಿ ವೇದಘೋಷದೊಂದಿಗೆ ಅಭಿಷೇಕ ನೆರವೇರಿಸಲಾಯಿತು.

ರಾಜ್ಯದ ವಿವಿಧಭಾಗಗಳು ಮತ್ತು ಆಂದ್ರಪ್ರದೇಶದಿಂದ ಭಕ್ತರು ಹಾಗೂ ಮಕ್ಕಳಭಾಗ್ಯ ಅಪೇಕ್ಷಿಸಿ ಮಡಿಲು ತುಂಬಿ ಹರಕೆ ಹೊತ್ತ ನೂರಾರು ದಂಪತಿಗಳು, ಕಂಕಣಭಾಗ್ಯ ಅಪೇಕ್ಷಿತರು, ಪಾದುಕೆಯ ಪಲ್ಲಕ್ಕಿಯೊಡನೆ 20ಕಿಮಿಗೂ ಹೆಚ್ಚು ಗಿರಿಶಿಖರಗಳ ದಾರಿಯನ್ನು ಕ್ರಮಿಸಿ ಅಷ್ಠತೀರ್ಥಗಳಲ್ಲಿ ಪವಿತ್ರಸ್ನಾನ ಮಾಡಿದರು. ಇಡೀ ದಿನವೇದಪಾರಾಯಣ ನಡೆದರೆ ರಾತ್ರಿ ಶ್ರೀಯೋಗಾನರಸಿಂಹಸ್ವಾಮಿ ಗಿರಿಪ್ರದಕ್ಷಿಣೆವೇಳೆ ವಿಷ್ಣುಸಹಸ್ರನಾಮ ಪಾರಾಯಣಮಾಡಲಾಯಿತು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *