Breaking News

ಕಾಂಗ್ರೆಸ್ ಕಳ್ಳರ ಸಂತೆಯಲ್ಲಿ ಕಡುಭ್ರಷ್ಟ ಮಹಾರಾಜರು ಡಿ ಕೆ ಶಿವಕುಮಾರ್: ರಾಜ್ಯ ಬಿಜೆಪಿ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿಯ ಸಿಬಿಐ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಸಾರಸಗಟಾಗಿ ಹಿಂಪಡೆದು, ರಾಜ್ಯವನ್ನು ಗೂಂಡಾ, ಭ್ರಷ್ಟಚಾರಿಗಳ ಅಡುಗುದಾಣ ಮಾಡುತ್ತಿದೆ. ಕಾಂಗ್ರೆಸ್ ಕಳ್ಳರ ಸಂತೆಯಲ್ಲಿ ಕಡುಭ್ರಷ್ಟ ಮಹಾರಾಜರು ಡಿ ಕೆ ಶಿವಕುಮಾರ್ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ನ್ಯಾಯ, ಪ್ರಾಮಾಣಿಕತೆ ಎಂದು ಭಾಷಣ ಬಿಗಿಯುವ ಸಿದ್ದರಾಮಯ್ಯರವರೇ, ಡಿ. ಕೆ. ಶಿವಕುಮಾರ್ 5 ವರ್ಷಗಳಲ್ಲಿ 380 ಪಟ್ಟು ಅಕ್ರಮ ಆಸ್ತಿಯ ಗಂಟು ಮಾಡಿಕೊಂಡರೂ ಚಕಾರ ಎತ್ತದ ನೀವು, ಈಗ ಅವರ ಮೇಲಿನ ಸಿಬಿಐ ತನಿಖೆಯನ್ನೇ ಹಿಂಪಡೆದು ಭ್ರಷ್ಟರ ಮಹಾಪೋಷಣೆ ಮಾಡುತ್ತಿದ್ದೀರಿ. ಕಾಂಗ್ರೆಸ್‌ ಒಂದು ಭ್ರಷ್ಟರ ಕೂಟ ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟ್ವೀಟ್‌ ಮಾಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಸೇಡಿನ ಭಾಗವಾಗಿ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಕೇಸ್ ವಜಾಗೊಳಿಸುವಂತೆ ಡಿ ಕೆ ಶಿವಕುಮಾರ್ ಅವರು ಮಾಡಿದ್ದ ಮನವಿಯನ್ನು ಘನ ಉಚ್ಚ ನ್ಯಾಯಾಲಯ ಈಗಾಗಲೇ ತಿರಸ್ಕರಿಸಿ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ. ಆದಾಗ್ಯೂ ಕಾನೂನು ಸಚಿವ ಹೆಚ್‌ ಕೆ ಪಾಟೀಲ್ ಅವರು ತಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಪೋಷಣೆಯ ಕ್ರಮವನ್ನು ಸಮರ್ಥಿಸಲು ವ್ಯರ್ಥ ಪ್ರಯತ್ನ ನಡೆಸಿರುವುದು ಅವರ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *