ಮಡಿಕೇರಿ: ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣದ ವರದಿ ಬಹುತೇಕ ಅಂತಿಮಗೊಂಡಿದೆ. ಡಿಸೆಂಬರ್ ತಿಂಗಳಿನಲ್ಲಿ ವರದಿಯನ್ನು ರೈಲ್ವೆ ಸಚಿವಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.2022ರ ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಳಗೊಳ-ಕುಶಾಲನಗರ ನಡುವಿನ 84.50 ಕಿ. ಮೀ. ನೂತನ ರೈಲು ಮಾರ್ಗದ ನಿರ್ಮಾಣಕ್ಷೆ ಸಮೀಕ್ಷೆ ನಡೆಸಲು ಆದೇಶಿಸಲಾಗಿತ್ತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಈ ವರದಿಯನ್ನು ಮುಂದಿನ ತಿಂಗಳು ಸಲ್ಲಿಸಲಿದೆ.ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ಯೋಜನೆ ಇದಾಗಿದೆ. ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಅಗತ್ಯ ಇರುವ ಭೂ ಸಮೀಕ್ಷೆಯನ್ನು ಸಹ ನಡೆಸಲಾಗಿದೆ. ಸಮೀಕ್ಷೆ ವರದಿ, ಡಿಪಿಆರ್ ರೈಲ್ವೆ ಸಚಿವಾಲಯಕ್ಕೆ ಸಲ್ಲಿಕೆಯಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





