ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆತಿಥೇಯ ಭಾರತ ತಂಡ 209 ರನ್‌ಗಳ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಇದೇ ವೇಳೆ ಭಾರತದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್‌ನಲ್ಲಿ ಡೈಮಂಡ್ ಡಕ್‌ಗೆ ಔಟಾದ ಭಾರತದ ಮೂರನೇ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಆಸೀಸ್ ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಅವರಿಂದ ರನೌಟ್ ಆಗುವ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಒಂದೇ ಒಂದು ಎಸೆತವನ್ನು ಎದುರಿಸದೆ ವಿಕೆಟ್ ಒಪ್ಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





