Breaking News

ಪ್ಲಾಸ್ಟಿಕ್ ಜಾರ್‌ನಲ್ಲಿ ನಾಗರ ಹಾವನ್ನು ತಂದು ಪತ್ನಿ ಮತ್ತು ಮಗಳು ಮಲಗಿದ್ದ ಕೋಣೆಗೆ ಹಾವನ್ನು ಬಿಟ್ಟಿದ್ದಾನೆ…

ಬರ್ಹಾಂಪುರ: ವಿಷಪೂರಿತ ಹಾವನ್ನು ಕೋಣೆಗೆ ಬಿಡುವ ಮೂಲಕ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಂದ ಘಟನೆ ಒಡಿಶಾದ ಗಂಜಾಂದಲ್ಲಿ ನಡೆದಿದೆ. 25 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಂಜಾಂನಿಂದ ಸುಮಾರು 60 ಕಿಮೀ ದೂರದಲ್ಲಿರುವ ಕಬಿಸೂರ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಧೇಗಾಂವ್ ಗ್ರಾಮದಲ್ಲಿ ಒಂದೂವರೆ ತಿಂಗಳ ಹಿಂದೆ ಈ ಘಟನೆ ನಡೆದಿದೆ.

ಆರೋಪಿಯನ್ನು ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಕೆ ಬಸಂತಿ ಪತ್ರಾ (23) ಇವರಿಬ್ಬರು ವೈವಾಹಿಕ ವಿವಾದವನ್ನು ಹೊಂದಿದ್ದರು. ಅವರು 2020 ರಲ್ಲಿ ವಿವಾಹವಾದರು. ಇವರು ದೇಬಾಸ್ಮಿತಾ ಎಂಬ ಎರಡು ವರ್ಷದ ಮಗಳನ್ನು ಹೊಂದಿದ್ದಾರೆ. ಆರೋಪಿಯು ಹಾವಾಡಿಗನಿಂದ ಹಾವನ್ನು ಖರೀದಿ ಮಾಡಿದ್ದಾನೆ. ಧಾರ್ಮಿಕ ಉದ್ದೇಶಗಳಿಗಾಗಿ ಸರೀಸೃಪವನ್ನು ಬಳಸುವುದಾಗಿ ಸುಳ್ಳು ಹೇಳಿ ಹಾವನ್ನು ಆರೋಪಿ ಗಣೇಶ್ ಹಾವನ್ನು ಖರೀದಿದ್ದಾನೆಂದು ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಅಕ್ಟೋಬರ್ 6 ರಂದು ಪ್ಲಾಸ್ಟಿಕ್ ಜಾರ್‌ನಲ್ಲಿ ನಾಗರ ಹಾವನ್ನು ತಂದು ಪತ್ನಿ ಮತ್ತು ಮಗಳು ಮಲಗಿದ್ದ ಕೋಣೆಗೆ ಹಾವನ್ನು ಬಿಟ್ಟಿದ್ದಾನೆ. ಮರುದಿನ ಬೆಳಗ್ಗೆ ಇಬ್ಬರೂ ಹಾವು ಕಡಿತದಿಂದ ಮೃತಪಟ್ಟಿದ್ದಾರೆ. ಆರೋಪಿ ಹಾವನ್ನು ಬಿಟ್ಟು ಮತ್ತೊಂದು ಕೋಣೆಯಲ್ಲಿ ಮಲಗಿದ್ದಾನೆ. ಪೊಲೀಸರು ಆರಂಭದಲ್ಲಿ ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಆರೋಪಿ ಮಾವ ಎಫ್‌ಐಆರ್ ದಾಖಲಿಸಿದ ನಂತರ ಆರೋಪಿಯನ್ನು ವಿಚಾರಣೆ ನಡೆಸಲಾಯಿತು ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಮೀನಾ ತಿಳಿಸಿದ್ದಾರೆ.

Share News

About BigTv News

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *