Breaking News

ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ….

ರಾಮನಗರ:‌ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು ತೀರ್ಪುಗಳು ನಮ್ಮ ಕಣ್ಣಮುಂದೆ ಇವೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ಚರ್ಚೆ ವಿಚಾರಣೆ ನಡೆದು ಆದೇಶಗಳು ಬಂದಿವೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಇದು ಸಿಎಂಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *