ಬೆಂಗಳೂರು: ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಈ ಬಗ್ಗೆ ಬೆಂಗಳೂರು ಪದವೀಧರರ ಕ್ಷೇತ್ರ ಮತದಾರರ ನೋಂದಣಾಧಿಕಾರಿ & ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ? ಮತದಾರರ ಕರಡು ಪಟ್ಟಿ ಪರಿಶೀಲನೆಗೆ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಸಂಪರ್ಕಿಸಬಹುದು. ಹಾಗೂ ಕೋಲಾರ ಸೇರಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.ಇದರ ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ತಹಸೀಲ್ದಾರ್ ಕಚೇರಿಗಳಲ್ಲಿ ಮತ್ತು ಆಯುಕ್ತರು, ತುಮಕೂರು ಮಹಾನಗರ ಪಾಲಿಕೆ ಮತ್ತು ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ಕಚೇರಿಯ ಸಮಯದಲ್ಲಿ ಪರಿಶೀಲನೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





