Breaking News

ಕಾಂಗ್ರೆಸ್‌ ಪಕ್ಷದತ್ತ ಹೆಜ್ಜೆ ಹಾಕುತ್ತುದ್ದಾರೆ….

ಹುಬ್ಬಳ್ಳಿ: ಬಿಜೆಪಿ ಹಿರಿಯ ಲಿಂಗಾಯತ ನಾಯಕ ವಿ ಸೋಮಣ್ಣ ಅವರು ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಳಿಕ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ರು, ಇದೀಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದು, ಕಾಂಗ್ರೆಸ್‌ ಪಕ್ಷದತ್ತ ಹೆಜ್ಜೆ ಹಾಕುತ್ತುದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿದೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ ಅವರು, ಪಕ್ಷದಲ್ಲಿ ಅತೃಪ್ತಿ ಏನೇ ಇರಲಿ, ಬಹಿರಂಗ ಚರ್ಚೆ ಸಲ್ಲದು. ಮಾಜಿ ಸಚಿವ ಸೋಮಣ್ಣ ಬಂಡಾಯದ ಕುರಿತು ಹಾಗೂ ವಿಜಯೇಂದ್ರ ನೇಮಕದ ನಂತರ ಸೋಮಣ್ಣ ಅತೃಪ್ತಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಅದು ಏನೇ ಇದ್ದರೂ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಸೋಮಣ್ಣ ಹೈಕಮಾಂಡ್ ಗೆ ದೂರು ನೀಡುತ್ತಿರುವ ಕುರಿತು ಮಾಹಿತಿ ಇಲ್ಲ. ನಿಮ್ಮ ಕುಂದು ಕೊರತೆಗಳು ಏನೇ ಇರಲಿ ಅದನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಗಮನಕ್ಕೆ ತರಲಿ ಅಥವಾ ಇತರ ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಲಿ. ಮಾಧ್ಯಮದ ಮೂಲಕ ಇದನ್ನು ಚರ್ಚಿಸುವುದು ಒಳ್ಳೆಯದಲ್ಲ ಎಂದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *