Breaking News

ಭಾರತವು 2011ರ ನಂತರ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಲು ಸಾಧ್ಯವಾಗಲಿಲ್ಲ…..

2023ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ನಿರಾಸೆ ಅನುಭವಿಸಿ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿತು ಮತ್ತು ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿತ್ತು. ಆದರೆ ಮೂರನೇ ಬಾರಿಗೆ ವಿಶ್ವಕಪ್‌ ಟ್ರೋಫಿ ಎತ್ತುವ ಆಸೆ ಫಲಿಸಲಿಲ್ಲ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಆರಂಭದಿಂದ ಸೆಮಿಫೈನಲ್‌ವರೆಗಿನ ಎಲ್ಲಾ ಹತ್ತು ಪಂದ್ಯಗಳನ್ನು ಗೆದ್ದುಕೊಂಡಿತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅನಿರೀಕ್ಷಿತ ಸೋಲು ಎದುರಿಸಬೇಕಾಯಿತು. ಈ ಸೋಲಿನಿಂದ ಭಾರತವು 2011ರ ನಂತರ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಕೋಟ್ಯಂತರ ಭಾರತೀಯ ಅಭಿಮಾನಿಗಳಿಗೆ ನಿರಾಸೆಯಾಗಿದೆ.

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *