ಬೆಂಗಳೂರು: ಸಿಬಿಐ ತನಿಖೆ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಗೆ ಭಯ ಯಾಕೆ? ಸಿಬಿಐ ಸಾಕ್ಷ್ಯಾಧಾರ ಇಲ್ಲದ ವರದಿ ಕೊಟ್ಟರೆ ಅದು ನ್ಯಾಯಾಲಯದ ಎದುರು ಸಾಬೀತಾಗುತ್ತದೆಯೇ? ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಡವರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯವೇ? ಎಂದು ಪ್ರಶ್ನಿಸಿದರು. ಕಾಯಲು ನಿಮಗೇನು ಸಮಸ್ಯೆ ಎಂದರು. ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? ಎಂದರು.
ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸಚಿವಸಂಪುಟ ಹಿಂದಕ್ಕೆ ಪಡೆದಿದೆ. ಇದು ಸಂವಿಧಾನ ವಿರೋಧಿ ಕ್ರಮ. ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ಇಲ್ಲಿ ಬ್ಲ್ಯಾಕ್‍ಮೇಲ್ ಪಾಲಿಟಿಕ್ಸ್ ನಡೆದಿದೆ. ಅದರ ಅಂಗವಾಗಿ ಇಡೀ ಸಂಪುಟ, ಜನ ಏನೆಂದುಕೊಳ್ಳುವರೋ ಎಂಬುದನ್ನು ಯೋಚಿಸದೆ ಕೆಟ್ಟ ಪರಂಪರೆಗೆ ನಾಂದಿ ಹಾಡಿದೆ ಎಂದು ಆರೋಪಿಸಿದರು.
ಇಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರಶ್ನೆ ಬರುವುದಿಲ್ಲ. ತನಿಖೆ ರದ್ದು ಎಂದರೆ ನ್ಯಾಯಾಂಗ ವ್ಯವಸ್ಥೆ ತಿರಸ್ಕರಿಸಿದಂತೆ ಎಂದ ಅವರು, ಇದು ಆಲಿಬಾಬಾ ಔರ್ ಚಾಲೀಸ್ ಚೋರ್ ಎಂಬಂತಿದೆ. ಒಬ್ಬ ಭ್ರಷ್ಟ ಆರೋಪಿಯ ಸಮರ್ಥನೆಗೆ ಇಡೀ ಕ್ಯಾಬಿನೆಟ್ ನಿಂತದ್ದು ಕರ್ನಾಟಕದ ಘನತೆಗೆ ಕಪ್ಪು ಚುಕ್ಕಿ ಇಟ್ಟಂತೆ. ಇದು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇಟ್ಟ ಜನರು ಮಾಡುವ ಕೆಲಸ ಅಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





