ಹಾಸನ: ಕಾಂಗ್ರೆಸ್ ಸರ್ಕಾರ ಡಿಕೆ ಶಿವಕುಮಾರ್ ಕೇಸ್ ವಾಪಸ್ಸು ಪಡೆದಿದೆ. ಈ ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆ ಎನ್ನುವುದು ಇಲ್ಲ, ಸಿದ್ದರಾಮಯ್ಯನವರ ನೇತೃತ್ವದ ಕ್ಯಾಬಿನೆಟ್ ಏನಿದೆ ಈ ಕ್ಯಾಬಿನೆಟ್ ಶಿವಕುಮಾರ್ ಅವರ ಪಾದದಡಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಸರ್ಕಾರ ಡಿ.ಕೆ. ಶಿವಕುಮಾರ್ ಮೇಲೆ ಇದ್ದ ಪ್ರಕರಣ ವಾಪಸ್ ಪಡೆದಿರುವುದನ್ನು ನೋಡಿದರೇ ಇವರೆಲ್ಲಾ ಸಂವಿಧಾನ ಉಳಿಸುವ ಕಾನೂನು ರಕ್ಷಕರ. ಸಂವಿಧಾನವನ್ನ ಉಳಿಸೋರಾ ಇವರೆಲ್ಲಾ…? ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನ ಗಮನಿಸುತ್ತಿದ್ದೇನೆ. ಹಲವಾರು ಭಾರಿ ಹೇಳಿದ್ದು, ಇವತ್ತಿನ ಅವರ ತೀರ್ಮಾನ ಸಂವಿಧಾನವನ್ನು ಎಷ್ಟರ ಮಟ್ಟಿಗೆ ಉಳಿಸುವಂತಹವರು ಮತ್ತು ದೇಶದ ಕಾನೂನಿನ ವ್ಯವಸ್ಥೆಗಳ ಬಗ್ಗೆ ಎಷ್ಟು ಗೌರವ ಇಟ್ಕೊಂಡಿದ್ದಾರೆ ಗೊತ್ತಾಗುತ್ತದೆ ಎಂದು ಬೇಸರವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





