Breaking News

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಮುಖ್ಯ ಇಂಜಿನಿಯರ್‌ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸಭೆಯಿಂದಲೇ ಹೊರಗೆ…

ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಮುಖ್ಯ ಇಂಜಿನಿಯರ್‌ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸಭೆಯಿಂದಲೇ ಹೊರಗೆ ಕಳುಹಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಮನಪಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆದಿದೆ. ಕೆಯುಐಡಿಎಫ್‌ಸಿ ಕಾಮಗಾರಿ ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸಚಿವರು, ಕೆಯುಐಡಿಎಫ್‌ಸಿ ಮುಖ್ಯ ಇಂಜಿನಿಯರ್‌ ಜಯರಾಂರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಶೇ.60ರಷ್ಟು ಕಾಮಗಾರಿ ನಡೆಸಲು 4 ವರ್ಷ ಹಿಡಿದಿದೆ. ಇನ್ನುಳಿದ ಶೇ.40ರಷ್ಟು ಕಾಮಗಾರಿ ಇನ್ನು ನಾಲ್ಕೈದು ತಿಂಗಳಲ್ಲಿ ಸಂಪೂರ್ಣಗೊಳಿಸಲು ಆಗುತ್ತಾ? ಎಂದು ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರರೊಂದಿಗೆ ಕೈಜೋಡಿಸಿದ್ದೀರಾ ಎಂದು ಇಂಜಿನಿಯರ್ ಮೇಲೆ ಸಚಿವ ಬೈರತಿ ಸುರೇಶ್‌ ಫುಲ್ ಗರಂ ಆಗಿದ್ದಾರೆ‌.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *