ಬೆಂಗಳೂರು: ಮೇಡ್ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರಾಟ ನಡೆಸಿದ್ದಾರೆ. ಇಂದು(ನವೆಂಬರ್ 25) ಶನಿವಾರ ಬೆಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿರುವ ಬಗ್ಗೆ ಅತೀವ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಸ್ವದೇಶಿ ಸಾಮರ್ಥ್ಯದ ಬಗ್ಗೆ ನನ್ನ ಆತ್ಮವಿಶ್ವಾಸ ಹೆಚ್ಚಾಗಿದೆ. ಇದು ನನ್ನಲ್ಲಿ ಹೆಮ್ಮೆ ಮೂಡಿಸಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ. 2.5 ಸೆಕೆಂಡ್‌ಗೆ 240 ಕಿಲೋ ಮೀಟರ್ ವೇಗದಲ್ಲಿ ಸಂಚರಿಸುವ ಅಂದರೆ ಒಂದು ಗಂಟೆಗೆ 2,205 ಕಿಲೋ ಮೀಟರ್ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರುವ ತೇಜಸ್ ಯುದ್ಧ ವಿಮಾನದ ಹಾರಾಟದ ಅನುಭವವನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





