ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಕಂಡ ಕಾಂಗ್ರೆಸ್, 2024 ರ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು, ಇದೀಗ ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರಿಗೆ ಕಾಂಗ್ರೆಸ್ ಗಾಳ ಹಾಕಿದೆ.
ಈ ಕುರಿತು ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮಾಜಿ ಸಚಿವ ವಿ.ಸೋಮಣ್ಣರನ್ನಲ್ಲದೆ ನನ್ನನ್ನೂ ಕೂಡ ಕಾಂಗ್ರೆಸ್‌ನವರು ಕರೆದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಸಿದ್ಧಗಂಗಾ ಮಠಕ್ಕೆ ವಿ. ಸೋಮಣ್ಣ ಅವರು ಭೇಟಿ ನೀಡಿದ ವೇಳೆ ಸಂಸದ ಬಸವರಾಜು ಕೂಡ ಶ್ರೀಮಠಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿ, ನಿಮಗೆ ವಯಸ್ಸಾಗಿದೆ. ಆದರೂ ಪರವಾಗಿಲ್ಲ. ನೀವು ಬನ್ನಿ ಅಂತಾ ಕಾಂಗ್ರೆಸ್‌ನವರು ಕರೆದಿದ್ದಾರೆ. ಆದರೆ, ನಾನು ಬರಲ್ಲ ಅಂತ ಹೇಳಿದ್ದೇನೆ ಎಂದು ಬಸವರಾಜು ಸ್ಪಷ್ಟಪಡಿಸಿದ್ದಾರೆ.ನಾನು ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಂತಾ ಸೋಮಣ್ಣ ಹೇಳಿದ್ದಾರೆ. ಸೋಮಣ್ಣ ಅವರು ಕಾಂಗ್ರೆಸ್‌ಗೆ ಹೋಗ್ತಾರೆ ಅನ್ನೋದು ನನಗೆ ಗೊತ್ತಿಲ್ಲ. ತುಮಕೂರಿನಿಂದಲೇ ಸ್ಪರ್ಧೆ ಮಾಡ್ತೇನೆ ಅಂತಾ ಹೇಳಿದ್ದಾರೆ. ಕಾಂಗ್ರೆಸ್‌ನವರು ಸೋಮಣ್ಣ ಅವರನ್ನು ಮಾತ್ರ ಕರೆದಿಲ್ಲ. ನನ್ನನ್ನೂ ಕೂಡ ಕರೆದಿದ್ದಾರೆ ಅಂತಾ ಸ್ಪಷ್ಟನೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





