ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಹಾಗೂ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರು ಆಡಳಿತಾರೂಢ ಅವಾಮಿ ಲೀಗ್ ಪಕ್ಷದಿಂದ ತಮ್ಮ ನಾಮನಿರ್ದೇಶನವನ್ನು ದೃಢೀಕರಿಸಿದ ನಂತರ, ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವರದಿ ತಿಳಿಸಿದೆ. 36 ವರ್ಷದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ತಮ್ಮ ತವರು ಜಿಲ್ಲೆ ಮಗರಾ-1 ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಚುನಾವಣೆಯನ್ನು ಮುಂಬರುವ 2024ರ ಜನವರಿ 7ರಂದು ನಿಗದಿಪಡಿಸಲಾಗಿದೆ. ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಇತ್ತೀಚೆಗೆ ಮುಕ್ತಾಯಗೊಂಡ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅನುಭವಿಸಿದ ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





