Breaking News

ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು….

ಬೆಂಗಳೂರು: ಸಿದ್ದರಾಮಯ್ಯನವರು ಅಕ್ಕಿ ಕೊಡ್ತೀನಿ, ಬ್ಯಾಳಿ ಕೊಡ್ತೀನಿ, ಕೋಳಿ, ಕುರಿ ಕೊಡ್ತೀನಿ ಎನ್ನುತ್ತಾರೆ. 140 ಕೋಟಿಯಲ್ಲಿ ಶೇ 25 ದಲಿತರಿರುವ ನಾವು ನಮಗೆ ಕೋಳಿ, ಕುರಿ, ಅಕ್ಕಿ ಬೇಡ. ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪೃಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ಕೊಡಲು ಹೇಳಿದ್ದರು. ಬಡತನ, ಮೂಢನಂಬಿಕೆ, ಶಿಕ್ಷಣ ವಂಚಿತರಾಗಿರುವ ದಲಿತರನ್ನು ಮೇಲೆತ್ತುವ ಕೆಲಸವನ್ನು ಯಾವತ್ತೂ ಕಾಂಗ್ರೆಸ್ ಪಕ್ಷ ಮಾಡಲಿಲ್ಲ ಎಂದು ಕಿಡಿಕಾರಿದರು.
ಇನ್ನೂ ಈ ವೇಳೆ ಮಾಜಿ ಸಚಿವ ಸಿ.ಟಿ.ರವಿ ಅವರು ಮಾತನಾಡಿ, 2015ರವರೆಗೂ ನವೆಂಬರ್ 26ರ ಈ ದಿನವನ್ನು ಲಾಡೆ ಎಂದು ಕರೆಯುತ್ತಿದ್ದರು. ಸಂವಿಧಾನ ಗೌರವ ದಿನ ಎಂದು ಅದನ್ನು ಆಚರಿಸಲು ನರೇಂದ್ರ ಮೋದಿಜೀ ಅವರು ತಿಳಿಸಿದರು. ಭಾರತರತ್ನವನ್ನು ಅವರಿಗೆ ಅವರೇ ಕೊಟ್ಟುಕೊಂಡರು. ನೈಜ ಭಾರತರತ್ನ ಡಾ. ಅಂಬೇಡ್ಕರ್ ಅವರಿಗೆ ಭಾರತರತ್ನವನ್ನು ಹಲವು ದಶಕಗಳ ಬಳಿಕ ಅಟಲ್‍ಜೀ ಅವರ ಪ್ರಸ್ತಾವನೆಯ ನಂತರ ಪ್ರಧಾನಿ ವಿ.ಪಿ.ಸಿಂಗ್ ಅವರು ಬಿಜೆಪಿ ಬೆಂಬಲದ ಸರಕಾರ ಇದ್ದಾಗ ನೀಡಿದ್ದರು ಎಂದರು.

Share News

About BigTv News

Check Also

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು …

Leave a Reply

Your email address will not be published. Required fields are marked *