Breaking News

ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ಹೊಸ ಆತ್ಮವಿಶ್ವಾಸ ಸಿಕ್ಕಂತಾಗಿದೆ….

ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ಹೊಸ ಆತ್ಮವಿಶ್ವಾಸ ಸಿಕ್ಕಂತಾಗಿದೆ. ಸದ್ಯ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ಹುರುಪಿನೊಂದಿಗೆ ಸ್ಪರ್ಧಿಸಿದೆ. ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಭರ್ಜರಿಯಾಗಿ ಪ್ರಚಾರ ಮಾಡುತ್ತಿದೆ.ತೆಲಂಗಾಣದಲ್ಲಿ ಅಧಿಕಾರ ನಡೆಸುತ್ತಿರುವ ಬಿಆರ್‌ಎಸ್ ಪಕ್ಷಕ್ಕೆ ಪೈಪೋಟಿ ಕೊಡಲು ಸ್ಥಳೀಯ ಮಟ್ಟದಲ್ಲಿ ದೊಡ್ಡ ನಾಯಕರ ಕೊರತೆ ಇರುವ ಕಾರಣ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತದಾರರನ್ನು ಸೆಳೆಯಲು ಕರ್ನಾಟಕದ ಕ್ಯಾಬಿನೆಟ್‌ನ ಮುಕ್ಕಾಲು ಭಾಗದಷ್ಟು ಸಚಿವರನ್ನು ನಿಯೋಜಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸುಮಾರು 8 ರಿಂದ 10 ಕಾಂಗ್ರೆಸ್ ಸಚಿವರು ತೆಲಂಗಾಣದಲ್ಲಿ ಕಾಂಗ್ರೆಸ್ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *