Breaking News

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ….

ಬೆಂಗಳೂರು: ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳನ್ನ ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಮುಂದಿಟ್ಟು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.ಸ್ವಯಂಘೋಷಿತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದ್ದು, ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, ಕಳ್ಳತನಕ್ಕೇ ಇಳಿದುಬಿಟ್ಟಿದೆ. ಜಾರ್ಜ್ ಅವರ ಇಂಧನ ಇಲಾಖೆ ಮಾತ್ರವಲ್ಲ, ಕೆ ಹೆಚ್‌ ಮುನಿಯಪ್ಪ ಅವರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲೂ ಹೆಗ್ಗಣಗಳ ಕಾಟ ಜೋರಾಗಿದೆ. ಲಂಚ ಕೊಡುವುದಕ್ಕಾಗಿಯೇ ಅಕ್ರಮ ಅಕ್ಕಿ ಮಾರಾಟ ಮಾಡುತ್ತಿರುವುದು ಈಗೇನೂ ಗುಟ್ಟಾಗಿ ಉಳಿದಿಲ್ಲ. ತನ್ನಿಂದ ಕೊಡಲು ಅಕ್ಕಿಯೇ ಇಲ್ಲ ಎನ್ನುತ್ತಿರುವ ಕಾಂಗ್ರೆಸ್‌ ಕಲೆಕ್ಷನ್ ಆಸೆಗೆ ಟನ್‌ಗಟ್ಟಲೆ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಹಂತಕ್ಕೆ ತಲುಪಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *