ಹುಬ್ಬಳ್ಳಿ: ಬಿಜೆಪಿಯಲ್ಲಿ ಎಲ್ಲವೂ ಹದಗೆಟ್ಟು ಹೋಗಿದೆ. ಮುಂಬರುವ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸ್ಥಾನಗಳಿಂದ ಅವರು ಹೀನಾಯ ಸೋಲು ಕಾಣಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಈ ಹಿಂದೆ 2018 ರಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸಭೆ ಚುನಾವಣಾ ನಡೆತು, ಆವಾಗ ಎಷ್ಟೇ ಗುದ್ದಾಡಿದರು ಕೊನೆಗೆ ಬಂದು ನಿಂತಿದ್ದು 104ಕ್ಕೆ. ಇವತ್ತು ಬಿಜೆಪಿ ಹದಗೆಟ್ಟು ಹೋಗಿದೆ. ಈಗ ಚುನಾವಣಾ ನಡೆದ್ರೆ 66 ಅಲ್ಲಾ 40 ಸೀಟ್ ಸಹ ಬಿಜೆಗೆ ಬರೋದಿಲ್ಲ’ ಎಂದು ತಿಳಿಸಿದ್ದಾರೆ.ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ. ವಿಜಯೇಂದ್ರ ಅಲ್ಲಾ ಯಾರು ಅಧ್ಯಕ್ಷ ಆದರೂ ಅದನ್ನು ಸರಿ ಮಾಡಲು ಆಗುವುದಿಲ್ಲ. ಇನ್ನು ಐದು ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಒಳ್ಳೆಯ ಫಲಿತಾಂಶ ಬರುತ್ತೆ’ ಎಂದು ಖಡಕ್ ಆಗಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





