Breaking News

ರಾಗಿ ಬೆಳೆಗಾರಿಗೆ ಗುಡ್‌ನ್ಯೂಸ್‌….

ಬೆಂಗಳೂರು: ಈ ವರ್ಷ ಮಳೆ ಕೈಕೊಟ್ಟಿದ್ದು, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ದೊಡ್ಡ ಸವಾಲಾಗಿದ್ದರೆ, ಇತ್ತ ರೈತರ ಬದುಕು ಕೂಡ ಸಂಕಷ್ಟಕ್ಕೆ ಸಿಲುಕಿದೆ. ನಿರೀಕ್ಷಿಸಿದ ಮಟ್ಟಿಗೆ ಮಳೆಯಾಗದೇ ನೀರಿಲ್ಲದೇ ಬೆಳೆಗಳು ಜಮೀನುಗಳಲ್ಲೇ ಒಣಗಿ ನಾಶವಾಗುತ್ತಿದೆ.ಬರ ಹಾಗೂ ಇತರ ಸವಾಲುಗಳ ಮಧ್ಯೆಯೇ ರೈತರು ಈ ಬಾರಿ ಒಂದಿಷ್ಟು ಬೆಳೆಯನ್ನು ಬೆಳೆದಿದ್ದು, ಇದೀಗ ಫಸಲ ಮಾರಾಟಕ್ಕೆ ಸಿದ್ಧರಾಗಿದ್ದಾರೆ. ಹೀಗಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದರಲ್ಲಿ ರಾಗಿ ಬೆಳೆಗಾರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಈ ಬಾರಿ ಬೆಲೆ ಏರಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಆರಂಭಿಸಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಹಾಗೂ ನೆಲಮಂಗಲ ತಾಲೂಕಿನಲ್ಲಿ ಬಹುತೇಕ ಭಾಗಗಳಲ್ಲಿ ರಾಗಿ ಬೆಳೆಯಲಾಗುತ್ತದೆ. ಈಗಾಗಲೇ ರಾಗಿ ಬೆಳೆ ಬಂದಿದ್ದು, ಜಿಲ್ಲೆಯಲ್ಲಿ ನಾಳೆ ಅಂದರೆ ಡಿಸೆಂಬರ್‌ 1ರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ವರದಿಯಾಗಿದೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *