ಹೈದರಾಬಾದ್:ತೆಲಂಗಾಣ ವಿಧಾನಸಭೆ ಚುನಾವಣೆಯು ಇಂದು ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಬಿಎಸ್‌ಆರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದರ ನಡುವೆಯೇ ತೆಲಂಗಾಣ ಹಾಗೂ ಆಂದ್ರಪ್ರದೇಶ ಪೊಲೀಸರು ನಡುವೆ ಸಂಘರ್ಷ ಏರ್ಪಟ್ಟಿದೆ. ಇದು ಎರಡು ರಾಜ್ಯಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ.ನವೆಂಬರ್ 30 ರ ಗುರುವಾರ ಮಧ್ಯರಾತ್ರಿ ನಾಗಾರ್ಜುನ ಸಾಗರ ಅಣೆಕಟ್ಟು ಬಳಿ ಆಂಧ್ರಪ್ರದೇಶದ ಪೊಲೀಸರು ಬೇಲಿ ಹಾಕಲು ಯತ್ನಿಸಿದ್ದಾರೆ. ಇದನ್ನು ತಡೆಯಲು ತೆಲಂಗಾಣ ಪೊಲೀಸರು ಮುಂದಾಗಿದ್ದಾರೆ. ಈ ಸಮಯದಲ್ಲಿ ಎರಡೂ ರಾಜ್ಯಗಳ ಪೊಲೀಸರ ನಡುವೆ ಬಡಿದಾಟವಾಗಿದೆ ಎಂದು ವರದಿಯಾಗಿದೆ.
ಪ್ರಸ್ತುತ ಅಣೆಕಟ್ಟಿನಲ್ಲಿ 26 ಗೇಟ್‌ಗಳಿವೆ. ಆಂದ್ರ ಪ್ರದೇಶ ಪೊಲೀಸರು ಗೇಟ್ ಸಂಖ್ಯೆ 13 ರಲ್ಲಿ ಫೆನ್ಸಿಂಗ್ ಅನ್ನು ಸ್ಥಾಪಿಸಿದಾಗ, ಅದು ತಮ್ಮ ರಾಜ್ಯಕ್ಕೆ ಸೇರಿದೆ ಎಂದು ಹೇಳಿಕೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ವ್ಯವಸ್ಥೆಯ ಭಾಗವಾಗಿ ಗೇಟ್‌ನಲ್ಲಿ ಸ್ಥಾಪಿಸಲಾದ ಸಿಸಿಟಿವಿ ಕ್ಯಾಮೆರಾಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





