Breaking News

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್….

ಬೆಂಗಳೂರು : ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಗುರುವಾರ ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದರು.ಶಾಸಕ ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿಗಳು ಭೇಟಿಯಾಗಿರುವ ಬಗ್ಗೆ ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬಿ.ಆರ್.ಪಾಟೀಲ್ ಅವರೊಂದಿಗೆ ಚರ್ಚಿಸಲಾಗಿತ್ತು, ಅವರು ಅಧಿವೇಶನಕ್ಕೆ ಆಗಮಿಸಲು ಮನವೊಲಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.ಇನ್ನೂ ನಿಮಾನ್ಸ್ ನಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲದೇ ರೋಗಿಯೊಬ್ಬರ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಿಮಾನ್ಸ್ ನಿರ್ದೇಶಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *