Breaking News

262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ….

ಬೆಂಗಳೂರು: ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ವಿವರಿಸಿದರು.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *