Breaking News

ಬೆಂಗಳೂರಿನ‌ 15 ಶಾಲೆಗಳಿಗೆ ಹುಸಿ ಬಾಂಬ್‌ ಕರೆ ಆತಂಕ ಪಡುವುದು ಬೇಡ ಡಿ.ಕೆ.ಶಿ..

ಬೆಂಗಳೂರು: ಬೆಂಗಳೂರಿನ‌ 15 ಶಾಲೆಗಳಿಗೆ ಹುಸಿ ಬಾಂಬ್‌ ಕರೆ ಬಂದಿದ್ದು. ಸಾರ್ವಜನಿಕರು ಆತಂಕ ಪಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು ಪೊಲೀಸರು ಈಗಾಗಲೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೆ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಹೀಗೆ ಇ- ಮೇಲ್‌ ಸಂದೇಶದ ಮೂಲಕ ಬೆದರಿಕೆ ಬಂದಿದೆ. ಪೋಲಿಸ್ ಆಯುಕ್ತರು ಈಗಾಗಲೆ ಸುದ್ದಿಗೋಷ್ಠಿ ನಡೆಸಿ ಇದು ಹುಸಿ ಬಾಂಬ್‌ ಬೆದರಿಕೆ ಎಂದು ಮಾಹಿತಿ ನೀಡಿದ್ದಾರೆ. ಪೋಷಕರು ಆತಂಕದಲ್ಲಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಧೈರ್ಯದಿಂದ ಇರಬೇಕು ಎಂದರು.

ಈಗಾಗಲೆ ಬಾಂಬ್‌ ನಿಷ್ಕ್ರಿಯದಳ ಸ್ಥಳ ಪರಿಶೀಲನೆ ನಡೆಸಿದೆ. ಪೊಲೀಸ್‌ ಭಧ್ರತೆ ಇರುವ ಕಾರಣ ನಮ್ಮ ಮನೆ ಹತ್ತಿರ ಹೀಗೆ ಆಗುವ ಸಾಧ್ಯತೆ ಕಡಿಮೆ. ಆದರೂ ಇದು ಪ್ರಮುಖ ಪ್ರದೇಶವಾದರಿಂದ ಸ್ವಲ್ಪ ಎಚ್ಚರದಿಂದ ಇರಬೇಕು. ಬೆಂಗಳೂರು ಜನತೆಗೆ ಯಾವ ಆತಂಕ ಬೇಡ ಕೆಲವು ದುಷ್ಕರ್ಮಿಗಳಿಂದ ಈ ಬೆದರಿಕೆ ಕರೆ ಬಂದಿದ್ದು, 24 ಗಂಟೆಯೊಳಗೆ ಆರೋಪಗಳನ್ನು ಪತ್ತೆ ಹಚ್ಚುತ್ತೇವೆ ಎಂದರು.

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *