ಭೋಪಾಲ್: ಮಧ್ಯಪ್ರದೇಶ ರಾಜ್ಯದಲ್ಲಿ ಈ ಬಾರಿ ಅಧಿಕಾರ ಯಾರಿಗೆ?. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ.ಈ ಬಾರಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಗುರುವಾರ ಪಂಚ ರಾಜ್ಯಗಳ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿವಿಧ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಗುರುವಾರ ಸಂಜೆ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳು ಮಧ್ಯಪ್ರದೇಶ ರಾಜ್ಯದಲ್ಲಿ ಅಧಿಕಾರಕ್ಕೆ ತೀವ್ರ ಪೈಪೋಟಿ ಇದೆ ಎಂಬ ಚಿತ್ರಣವನ್ನು ನೀಡಿವೆ. ಕೆಲವು ಸಮೀಕ್ಷೆಗಳ ಪ್ರಕಾರ ರಾಜ್ಯ ಮತ್ತೆ ಬಿಜೆಪಿ ಕೈ ಸೇರಲಿದೆ. ಕೆಲವು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





