ಬಳ್ಳಾರಿ: ಇಂದು ವಿಶ್ವ ಏಡ್ಸ್ ದಿನ. ಹಲವಾರು ಕಾರ್ಯಕ್ರಮಗಳ ಮೂಲಕ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ನಡುವೆ ಬಳ್ಳಾರಿಯಲ್ಲಿ ಆರೋಗ್ಯ ಇಲಾಖೆ ವರದಿಯೊಂದನ್ನು ಬಿಡುಗಡೆ ಮಾಡಿದೆ. ಬಳ್ಳಾರಿಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ ಸೋಂಕು ಇರುವುದು ದೃಢಪಟ್ಟಿದ್ದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ನಗರದ ಜಿಲ್ಲಾ ಆಸ್ಪತ್ರೆಯ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





