ಮೈಸೂರು: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ. ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳು ಸೇರ್ಪಡೆ ಆಗಿದ್ದವು. ಆದರೆ, ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ತೆರೆದ ಕಾರಣ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಕಡಿಮೆ ಆಗಿದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ಹೊಸ ವಿವಿಯಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ.
ಕಳೆದ ವರ್ಷ ವಿವಿಧ ಸ್ನಾತಕ ಪದವಿ ಕೋರ್ಸ್‌ಗಳಿಗೆ 36 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಈ ಶೈಕ್ಷಣಿಕ ಸಾಲಿನಲ್ಲಿ 26 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, 10 ಸಾವಿರ ವಿದ್ಯಾರ್ಥಿಗಳು ಕಡಿಮೆ ಆಗಿದ್ದಾರೆ. ಈ ಹಿಂದೆ ಮೈಸೂರು ವಿವಿ ವ್ಯಾಪ್ತಿಯಲ್ಲಿ 232 ಕಾಲೇಜುಗಳು ಬರುತ್ತಿದ್ದವು. ಈಗ ಆ ಸಂಖ್ಯೆ 111ಕ್ಕೆ ಇಳಿದಿದೆ. ಬೋಧಕ-ಬೋಧಕೇತರ ಸೇರಿದಂತೆ ಕಾಯಂ ನೌಕರರಿಗೆ ಸರಕಾರದಿಂದಲೇ ವೇತನ ಬರುತ್ತದೆ. ಅತಿಥಿ ಉಪನ್ಯಾಸಕರು ಸೇರಿದಂತೆ ಕಾಯಂ ಅಲ್ಲದ ಸಿಬ್ಬಂದಿಗೆ ವಿವಿಯೇ ವೇತನ ಭರಿಸಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





