ಬೆಂಗಳೂರು: ತೆಲಂಗಾಣ ವಿಧಾನಸಭಾ ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ತಿಳಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೆಲಂಗಾಣದತ್ತ ಮುಖ ಮಾಡಿದ್ದಾರೆ. ತೆಲಂಗಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆಗೆ ಸದಾಶಿವನಗರದಲ್ಲಿ ಡಿ ಕೆ ಶಿವಕುಮಾರ್ ಮಾತನಾಡಿ,ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತೆಲಂಗಾಣ ಚುನಾವಣೆ ಫಲಿತಾಂಶ ಬರುವ ಹಿನ್ನೆಲೆಯಲ್ಲಿ ತಾವು ತೆರಳುತ್ತೀರಾ ಎಂಬ ಪ್ರಶ್ನೆಗೆ ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





