ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಮೈಸೂರು ತಾಲೂಕು ಆರೋಗ್ಯಾಧಿಕಾರಿ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೈಸೂರು ಮಾತಾ ಆಸ್ಪತ್ರೆ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸರಕಾರಿ ಅತಿಥಿಗೃಹದಲ್ಲಿ ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಳೆ ನೋಟಿಸ್ ಅಂಟಿಸಿ ತಾಲೂಕು ಆರೋಗ್ಯಧಿಕಾರಿ ರಾಜೇಶ್ವರಿ ಅವರು ಕರ್ತವ್ಯ ಲೋಪ ಎಸಗಿದ್ದಾರೆ. ಇದೇ ರೀತಿ ಅನಧಿಕೃತ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ. ರವಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





