ಬೆಂಗಳೂರು: ತೆಲಂಗಾಣ ವಿಧಾನಸಭಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ತಿಳಿಸಿವೆ. ಒಂದು ವೇಳೆ ಕಾಂಗ್ರೆಸ್‌ಗೆ ಬಹುಮತ ಬಂದರೆ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಾಗಿರುವುದರಿಂದ ಟಬ್ರಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿಕೆ ಶಿವಕುಮಾರ್ ಫೀಲ್ಡಿಗಿಳಿಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ತೆಲಂಗಾಣದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅವರು ಭಾನುವಾರ ತೆಲಂಗಾಣಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಆರ್‌ಎಸ್‌ನ ಕೆ ಚಂದ್ರಶೇಖರ್ ರಾವ್ ಅವರು ನಮ್ಮ ಶಾಸಕರಿಗೆ ಬಲೆ ಬೀಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಮ್ಮ ಅಭ್ಯರ್ಥಿಗಳು ನಮಗೆ ಸಿಎಂ (ಕೆಸಿಆರ್) ಅವರೇ ಸಂಪರ್ಕಿಸಿದ್ದಾರೆ ಎಂದು ನಮಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಸರಳ ಬಹುಮತವನ್ನು ಪಡೆಯುವ ವಿಶ್ವಾಸವಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





