ಹುಬ್ಬಳ್ಳಿ: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿರುವ ವಿಚಾರ ರಾಜ್ಯಾದ್ಯಂತ ಸದ್ದು ಮಾಡಿದ್ದು, ಈ ಸುದ್ದಿ ಸಿಬ್ಬಂದಿ, ಪೋಷಕರು ಸೇರಿದಂತೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇನ್ನು ಹುಬ್ಬಳ್ಳಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಬಾಂಬ್ ಸ್ಫೋಟ ಆಗಿದೆಯಾ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರುತ್ತವೆ ಎಂದು ವ್ಯಂಗ್ಯವಾಡಿದ್ದಾರೆ.i
ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ ವ್ಯರ್ಥ ಮಾಡಿದರೆ ಹೇಗೆ?. ಅದಕ್ಕೆ ಸರ್ಕಾರ, ಪೊಲೀಸ್ ಇಲಾಖೆ ಇದೆ. ಬೇರೆ ಸಮಸ್ಯೆಗಳು ಸಾಕಷ್ಟಿವೆ. ಅದರ ಕುರಿತು ನಮಗೂ ಹೇಳುವುದಕ್ಕೆ ಬರಲ್ಲ.ವಿರೋಧ ಪಕ್ಷದವರದ್ದು ಸಮಸ್ಯೆ, ನಮ್ಮದು ಸಮಸ್ಯೆ. ಇದರಿಂದ ಕೊನೆಗೆ ಜನರು ಗೊಂದಲದಲ್ಲಿ ಸಿಲುಕುತ್ತಾರೆ ಎಂದರು.
ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಪ್ರತಿಕ್ರಿಯಿಸಿ, ಈಗಾಗಲೇ ನಮ್ಮ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಆಕಾಂಕ್ಷಿಗಳ ಪಟ್ಟಿ ಕಳುಹಿಸಿದ ನಂತರ ಹೈಕಮಾಂಡ್ ಅಂತಿಮಗೊಳಿಸುತ್ತದೆ ಎಂದರು. ಇನ್ನು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ವಿಚಾರವಾಗಿ ಪ್ರಕತಿಕ್ರಿಯಿಸಿ, ಬರಗಾಲದ ಚರ್ಚೆ ಆಗುತ್ತದೆ, ಅದಕ್ಕೆ ಪ್ರಶ್ನೆ ಇಲ್ಲ. ನಮ್ಮ ಕ್ಷೇತ್ರದ್ದು ಅಥವಾ ಜಿಲ್ಲೆಯದ್ದು ಚರ್ಚೆ ಮಾಡಿದರೆ ಅದಕ್ಕೆ ಸರ್ಕಾರ ಉತ್ತರ ಕೊಡುತ್ತದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





