ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ (ಡಿಸೆಂಬರ್ 01) ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 23 ದಿನಗಳ ಅವಧಿಯಲ್ಲಿ 2 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ (ಡಿಸೆಂಬರ್ 01) ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ಪ್ರಾರಂಭಿಸಲಾಗಿದ್ದು, ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಹಾಗೂ ಸರ್ಕಾರಿ ರಜೆ ದಿನಗಳು, ದೀಪಾವಳಿ ಜಾತ್ರಾ ಮಹೋತ್ಸವ ಕಾರ್ತಿಕ ಸೋಮವಾರ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





