ಬೆಂಗಳೂರು: ಶುಕ್ರವಾರ ಬಾಂಬ್ ಬೆದರಿಕೆ ಮೇಲ್ ಬಂದ ಬೆಂಗಳೂರು ನಗರದ 48 ಶಾಲೆಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿವೆ. ಈ ಸಂಬಂಧ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಮೇಲ್‌ನ ಮೂಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಮೇಲ್‌ಗಳನ್ನು ವಿದೇಶದಿಂದ ‘khharijites@beeble.com’ ಎಂಬ ಇಮೇಲ್ ಮೂಲಕ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಬೀಬಲ್ ಥರ್ಡ್ ಪಾರ್ಟಿ ಆಕ್ಸೆಸ್ ಇಲ್ಲದ ಖಾಸಗಿ ಸುರಕ್ಷಿತ ಇಮೇಲ್ ಸೇವೆಯಾಗಿದೆ. ಆದ್ದರಿಂದ ಬೆದರಿಕೆ ಮೇಲ್ ಕಳುಹಿಸುವವರನ್ನು ಗುರುತಿಸಲು ಸಹಾಯ ಮಾಡುವ ಮಾಹಿತಿಯನ್ನು ಪಡೆಯುವ ಬಗ್ಗೆ ನಗರ ಪೊಲೀಸರು ಕಂಪನಿಗೆ ಪತ್ರ ಬರೆದಿದ್ದಾರೆ. ಪ್ರಕರಣದ ತನಿಖೆಗಾಗಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎನ್.ಸತೀಶ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





