ವಿಜಯಪುರ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಲೋಕಸಮರದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು, ಈ ಹಿಂದೆ ಕಾಂಗ್ರೆಸ್ ಸೇರ್ಪಡೆಯಾದ ನಾಯಕರನ್ನ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನಗಳಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಕೆ ಎಸ್ ಈಶ್ವರಪ್ಪ ಅವರ ಹೇಳಿಕೆ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಅವರು ಮತ್ತೆ ಬಿಜೆಪಿ ಜಗದೀಶ್ ಶೆಟ್ಟರ್ ಬರುತ್ತಾರೆ ಎಂದು ಹೇಳಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ಮಾತನಾಡಿ, ನಾನು ಭಾರತೀಯ ಜನತಾ ಪಕ್ಷಕ್ಕೆ ವಾಪಸ್ ಹೋಗುವೆ ಎನ್ನುವ ಕೆ.ಎಸ್.ಈಶ್ವರಪ್ಪ ಹೇಳಿಕೆ ಹಸಿಯಾದ ಸುಳ್ಳು ಎಂದು ಹೇಳಿದರು.
ನಾನು ಬಿಜೆಪಿಗೆ ಹೋಗಲ್ಲ. ಬೇರೆಯವರು ಕಾಂಗ್ರೆಸ್‌ಗೆ ಬರಬಾರದು ಎಂದು ನಾನು ಬಿಜೆಪಿಗೆ ವಾಪಸ್ ಬರುತ್ತಿದ್ದೇನೆ ಎಂದು ಬಿಂಬಿಸಲಾಗುತ್ತಿದೆ. ನಾನು ಮರಳಿ ಬಿಜೆಪಿಗೆ ಹೋಗುವ ಮಾತೇ ಇಲ್ಲ. ನನಗೆ ಮತ್ತು ಲಕ್ಷ್ಮಣ ಸವದಿಯವರಿಗೆ ಟಿಕೆಟ್ ತಪ್ಪಿಸಿದ ಪರಿಣಾಮವನ್ನು ಬಿಜೆಪಿಗೆ ಜನ ತೋರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಇದು ಮುಂದುವರಿಯಲಿದೆ. ಬಿಜೆಪಿಯವರು ಕಾಂಗ್ರೆಸ್‌ಗೆ ಹೋಗದಂತೆ ತಡೆಯಲು ನನ್ನ ಹೆಸರು ಬಳಕೆ ಮಾಡ್ತಿದ್ದಾರೆ. ಜಗದೀಶ್ ಶೆಟ್ಟರ್ ಅವರೇ ಬಿಜೆಪಿಗೆ ಬಂದು ಬಿಡ್ತಾರೆ ನೀವು ಕಾಂಗ್ರೆಸ್‌ಗೆ ಹೋಗಬೇಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





