Breaking News

ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆಗೆ ಸಭೆ ನಡೆಸಿ ಅಭ್ಯರ್ಥಿಯನ್ನ ದೇವೇಗೌಡ್ರು ಆಯ್ಕೆ…

ಹಾಸನ: 2019 ರ ಲೋಕಸಭಾ ಚುನಾವಣೆಯಲ್ಲಿ ಮೊಮ್ಮೊಗನಿಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು ಹಾಸನ ಕ್ಷೇತ್ರವನ್ನ ತ್ಯಾಗ ಮಾಡಿದ್ದು, ಇದೀಗ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಹಾಸನ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆಗೆ ಸಭೆ ನಡೆಸಿ ಅಭ್ಯರ್ಥಿಯನ್ನ ದೇವೇಗೌಡ್ರು ಆಯ್ಕೆ ಮಾಡಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ವಿರೋಧದ ಅಲೆ ಹೆಚ್ಚಾದ ಹಿನ್ನಲೆ ದೇವೇಗೌಡರು ಕಣಕ್ಕಿಳಿಯಬೇಕು ಎಂದು ಮುಖಂಡರು ಒತ್ತಡ ಕೇಳಿ ಬಂದಿದ್ದು, ಜೆಡಿಎಸ್​ ಕೋರ್​ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರ ನೇತೃತ್ವದಲ್ಲಿ ಸಂಸದರು, ಶಾಸಕರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರ ಜೊತೆಗೆ ಸಭೆ ನಡೆಸಿದ್ದು, ಒಮ್ಮತದ ನಿರ್ಧಾರದ ಮೇರೆಗೆ ಪ್ರಜ್ವಲ್ ರೇವಣ್ಣ ಅವರನ್ನ ಹಾಸನ ಅಭ್ಯರ್ಥಿಯಾಗಿ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು ಮಾತನಾಡಿ, ನನಗೆ ಇನ್ನೆರಡುವರೆ ವರ್ಷ ರಾಜ್ಯಸಭೆ ಅವಧಿ ಇದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರೇ ಸ್ಪರ್ಧೆ ಮಾಡುತ್ತಾರೆ, ಇದರಲ್ಲಿ ಯಾವುದೇ ಅನುಮಾನ ಬೇಡ. ನಮ್ಮ ಪಕ್ಷ ನಾಯಕರ ಜೊತೆಗೆ ನಾನು ಚರ್ಚೆ ಮಾಡಿದ್ದೇನೆ. ಈ ಹಿಂದೆ ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನಲ್ಲೂ ಈ ಹಿಂದೆ ಒಂದು ಸ್ಥಾನವನ್ನ ಗೆದ್ದಿದ್ದರು. ಈ ಬಾರೀ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು, ಹೆಚ್ಚು ಸ್ಥಾನ ಗೆಲುವು ಸಾಧಿಸುತ್ತೇವೆ ಎಂದು ಹೇಳಿದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *