Breaking News

ಸಿಎಂ ಕೆ ಚಂದ್ರಶೇಖರ್‌ ರಾವ್‌ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ….

ನವದೆಹಲಿ: 5 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಗೆಲ್ಲುವ ಶಾಸಕರನ್ನು ಅನ್ಯ ಪಕ್ಷಗಳ ನಾಯಕರು ಸೆಳೆಯುವ ಸಂಭವವಿರುವುದರಿಂದ ಈ ಎಲ್ಲ ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ತೆಲಂಗಾಣದಲ್ಲಿ ಈಗಾಗಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದ್ದು, ಹಾಲಿ ಸಿಎಂ ಕೆ ಚಂದ್ರಶೇಖರ್‌ ರಾವ್‌ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹೀಗಾಗಿ ಖುದ್ದಾಗಿ ತೆಲಂಗಾಣಕ್ಕೆ ಹೋಗುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಕೆ ಚಂದ್ರಶೇಖರ್ ರಾವ್‌ ಅವರಿಗೆ ಕರೆ ಸ್ವೀಕರಿಸಿರುವ ಶಾಸಕರೊಬ್ಬರು ನಮ್ಮನ್ನು ತಮ್ಮಡೆಗೆ ಬರುವಂತೆ ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಇದು ಎಲ್ಲ ರಾಜ್ಯಗಳಲ್ಲೂ ನಡೆಬಹುದಾಗಿದ್ದು, ಈ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರು ಎಚ್ಚರಿಕೆಯಿಂದಿರಬೇಕು. ಚುನಾವಣಾ ರಾಜ್ಯಗಳ ವೀಕ್ಷಕರಿಗೆ ಮತ ಎಣಿಕೆಯ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *