ಬೆಂಗಳೂರು: ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಕೊಳ್ಳಬಾರದು ಎಂಬ ಕಾರಣಕ್ಕೆ ತುರ್ತು ಬರ ಪರಿಹಾರವೆಂದು ಭಿಕ್ಷೆಯ ರೂಪದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ರಾಜ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 2,000 ರೂ. ಕೊಡುವುದಾಗಿ ಹೇಳಿದ್ದಾರೆ. ಆದರೆ, ಕಂದಾಯ ಸಚಿವರು 1,000 ದಿಂದ 2,000 ರೂ. ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಇವರಿಗೆ ಸ್ಪಷ್ಟತೆ ಇಲ್ಲ ಎಂದರು.ಇಂದು ಕೆಲಸ ನಿಲ್ಲಿಸಿ ನಾಳೆ ಕೆಲಸ ಮಾಡಲು ವ್ಯವಸಾಯ ಎನ್ನುವುದು ಕೈಗಾರಿಕೆಯಂತಲ್ಲ. ಒಂದು ಚೀಲ ಯೂರಿಯಾ ಬೆಲೆ ಎಷ್ಟು ಗೊತ್ತಾ? ಮಾತೆತ್ತಿದರೆ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುವಿರಿ. ಕೇಂದ್ರ ಸರ್ಕಾರಕ್ಕೂ ರೈತರ ಬಗ್ಗೆ ಕಾಳಜಿ ಇಲ್ಲ. ಎರಡೂ ಸರ್ಕಾರಗಳು ರೈತರು ಆತ್ಮಹತ್ಯೆ ಮಾಡಿಕೊಳ್ಳಲಿ ಎನ್ನುವ ಆಲೋಚನೆಯಲ್ಲಿರುವ ಹಾಗೆ ಕಾಣುತ್ತಿದೆ ಎಂದು ಹೇಳಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





