ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಪಕ್ಷಕ್ಕೆ ನೆರೆಯ ತೆಲಂಗಾಣದಲ್ಲಿ ಅಧಿಕಾರ ತಂದುಕೊಟ್ಟಿದೆ ಎಂದು ರಾಜ್ಯದ ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ತೆಲಂಗಾಣದಲ್ಲಿ ಬಿಆರ್ ಎಸ್ ಸರ್ಕಾರದ ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರದಿಂದ ಹಿನ್ನಡೆ ಆಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದೆ. ಜಾತಿ ಜಾತಿಗಳ ಮಧ್ಯೆ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿಯವರು ಮಾಡಿದರೆ ನಮ್ಮದು ಜನಪರ ನಿಲುವು ಎಂದರು.
ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್, ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಕಳೆದ ಬಾರಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಬಿಜೆಪಿ ಆಪರೇಷನ್ ಮಾಡಿ ಅಧಿಕಾರಕ್ಕೆ ಬಂದಿತ್ತು. ಕರ್ನಾಟಕದಲ್ಲಿ ಮಾಡಿದಂತೆಯೇ ಮಧ್ಯಪ್ರದೇಶಲ್ಲಿ ಬಿಜೆಪಿ ಅವರು ಆಪರೇಷನ್ ಮಾಡಿ ಅಧಿಕಾರ ಮಾಡಿದ್ದರು. ನಮ್ಮದು ಹಾಗಲ್ಲ. ನಮ್ಮದೇನಿದ್ದರೂ ಪ್ರಜಾಪ್ರಭುತ್ವದ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಎಂದು ಸಮರ್ಥಿಸಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news





