ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ 2023ರಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. 158 ಕ್ಷೇತ್ರದಲ್ಲಿ ಪಕ್ಷ ಮುನ್ನಡೆ ಪಡೆದಿದ್ದು, ಸರ್ಕಾರ ರಚನೆ ಮಾಡುವ ತಯಾರಿ ಆರಂಭಿಸಿದೆ. ಕಾಂಗ್ರೆಸ್ 69 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಮತದಾನ ನಡೆದಿತ್ತು. ರಾಜ್ಯದಲ್ಲಿ ಬಿಜೆಪಿ ಮಾತ್ರ ಮುನ್ನಡೆ ಪಡೆದಿಲ್ಲ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಹ ಬುಧ್ನಿ ಕ್ಷೇತ್ರದಲ್ಲಿ ಗೆಲುವಿನ ಸನಿಹದಲ್ಲಿದ್ದಾರೆ.
ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಈ ಬಾರಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿದ್ದವು. ಆದರೆ ಲೆಕ್ಕಾಚಾರ ಉಲ್ಟಾ ಆಗಿದ್ದು, ಜನರು ಬಿಜೆಪಿ ಬೆಂಬಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





