ಬೆಳಗಾವಿ: ಚಳಿಗಾಲದ ಅಧಿವೇಶನದ ಮೊದಲ ದಿನವೇ ವಂಶಾಡಳಿತ ರಾಜಕಾರಣದ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ವಂಶಾಡಳಿತ ರಾಜ್ಯ ಹಾಗೂ ರಾಷ್ಟ್ರವನ್ನೇ ಸರ್ವನಾಶ ಮಾಡಲಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಒಬ್ಬ ನಾಯಕನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನೀಡುಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ. ಅಲ್ಲಿಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದರು. ಹೊಸದಾಗಿ ನೇಮಕಗೊಂಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಗುರಿಯಾಗಿಸಿ ಮಾತನಾಡಿದ ಯತ್ನಾಳ್, ‘ಸವಲತ್ತು ಹೊಂದಿರುವವರು’ ಮಾತ್ರ ಪ್ರಮುಖ ಹುದ್ದೆಗಳನ್ನು ಪಡೆಯುತ್ತಿದ್ದಾರೆ ಎಂದು ಕುಟುಕಿದ್ದಾರೆ.
ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹನಾಗಿದ್ದೆ ಆದರೆ ಕಡೆಗಣಿಸಲಾಗಿದೆ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರ ಪ್ರಕರಣಗಳು ಅಥವಾ ಅಂತಹ ಯಾವುದೇ ಪ್ರಕರಣಗಳಿಲ್ಲ. ಯತ್ನಾಳ್‌ಗೆ ಮಹತ್ವದ ಹುದ್ದೆ ನೀಡಬೇಕೆಂದು ರಾಜ್ಯದ ಜನತೆ ಒತ್ತಾಯಿಸುತ್ತಿದ್ದಾರೆ. ಕೆಲವರು ಮಾತ್ರ ಇಂತಹ ಸವಲತ್ತುಗಳು ಮಾತ್ರ ಏಕೆ ಪಡೆಯಬೇಕು? ” ಎಂದು ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ.