ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆ ಎಂದೇ ಕರೆಯಲ್ಪಡುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಇದೀಗ ಹಂತ-ಹಂತವಾಗಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ. ಇದರ ಮಧ್ಯೆ ಹಿರಿಯೂರು ಅಥವಾ ಚಿತ್ರದುರ್ಗ ಆಸುಪಾಸಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅಂದಹಾಗೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಭದ್ರಾ ನೀರು ಹರಿಸುವ ಯೋಜನೆ, ಚಳ್ಳಕೆರೆಯ ನಾಯಕನಹಟ್ಟಿ ಬಳಿ ಡಿಆರ್‌ಡಿಓ ಪ್ರಾಜೆಕ್ಟ್, ಚಿತ್ರದುರ್ಗ ಮೂಲಕ (ತುಮಕೂರು- ಚಿತ್ರದುರ್ಗ- ದಾವಣಗೆರೆ) ನೇರ ರೈಲು ಸಂಪರ್ಕ ಯೋಜನೆ, ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಂಜೂರು ಸೇರಿದಂತೆ ಜಿಲ್ಲೆ ಹಂತ ಹಂತವಾಗಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿಕೊಳ್ಳುವತ್ತ ಸಾಗುತ್ತಿದೆ.
ಇದರ ಮಧ್ಯೆ ಈಗಾಗಲೇ ತುಮಕೂರು- ಚಿತ್ರದುರ್ಗ- ದಾವಣಗೆರೆ ನಡುವೆ ನೇರ ರೈಲು ಕಾಮಗಾರಿ ಚುರುಕು ಪಡೆದುಕೊಂಡಿದ್ದು, ಒಂದೆರಡು ವರ್ಷಗಳಲ್ಲಿ ಪ್ರಯಾಣಿಕರಿಗೆ ರೈಲು ಸೇವೆ ಸಂಚಾರ ಸಿಗಲಿದೆ. ಇದರ ಮಧ್ಯೆ ಲಡ್ಡು ಬಂದು ಬಾಯಿಗೆ ಬಿತ್ತು ಎಂಬ ಗಾದೆ ಮಾತಿನಂತೆ ಚಿತ್ರದುರ್ಗ ಅಥವಾ ಹಿರಿಯೂರು ಆಸುಪಾಸಿನಲ್ಲಿ ವಿಮಾನ ನಿಲ್ದಾಣ ಆರಂಭಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆಗಳು ನಡೆಯುತ್ತಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





