Breaking News

ಚಿಚಾಂಗ್ ಚಂಡಮಾರುತದ ಪರಿಣಾಮದಿಂದ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ…..

ಚಿಚಾಂಗ್ ಚಂಡಮಾರುತದ ಪರಿಣಾಮದಿಂದ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚೆನ್ನೈ ವಿಮಾನ ನಿಲ್ದಾಣದ ರನ್‌ವೇನಲ್ಲಿ ಭಾರಿ ಪ್ರಮಾಣದ ನೀರು ನಿಂತ ಕಾರಣ ಡಿಸೆಂಬರ್ 4 ರಂದು ಬೆಳಿಗ್ಗೆ ಎರಡು ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ವಿಮಾನ ಪ್ರಯಾಣ ವೇಳಾಪಟ್ಟಿ ಮೇಲೆ ಪರಿಣಾಮ ಬೀರಿದ್ದು, ಜೋರು ಗಾಳಿಯ ಪರಿಣಾಮ ಸರಿಸುಮಾರು 10 ಚೆನ್ನೈಗೆ ಹೋಗುವ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಯಿತು.
ಚೆನ್ನೈನಲ್ಲಿ ಇಳಿಯಬೇಕಿದ್ದ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳನ್ನು ಕೆಐಎಗೆ ತಿರುಗಿಸಲಾಗಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್) ಅಧಿಕಾರಿಗಳು ತಿಳಿಸಿದ್ದಾರೆ.ಇಂಡಿಗೋ, ಸ್ಪೈಸ್‌ಜೆಟ್, ಇತಿಹಾದ್, ಗಲ್ಫ್ ಏರ್, ಫ್ಲೈ ದುಬೈ, ಏರ್ ಇಂಡಿಯಾ, ಲುಫ್ತಾನ್ಸಾ ಮತ್ತು ಬ್ರಿಟಿಷ್ ಏರ್‌ವೇಸ್‌ಗೆ ಸೇರಿದ ವಿಮಾನಗಳನ್ನು ಚೆನ್ನೈನಿಂದ ಬೆಂಗಳೂರಿಗೆ ತಿರುಗಿಸಲಾಗಿದೆ. ಇಲ್ಲಿಯವರೆಗೆ 10 ವಿಮಾನಗಳು ಕೆಐಎಗೆ ಬಂದಿಳಿದಿವೆ ಮತ್ತು ಇನ್ನೊಂದು ಮಾರ್ಗದಲ್ಲಿದೆ ಎಂದು ಬಿಐಎಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಕೆಲವು ಗಂಟೆಗಳಲ್ಲಿ ಹೆಚ್ಚಿನ ವಿಮಾನಗಳನ್ನು ಕೆಐಎಗೆ ತಿರುಗಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಚೆನೈ ತ್ಯಾಜ್ಯ ನಿರ್ವಹಣೆ ಅಧ್ಯಯನಕ್ಕೆ ಭೇಟಿ ನೀಡಿದ ಡಿಕೆಶಿ

ಚೆನೈ: ಚೆನೈನ ಚೆಟ್​ಪೇಟೆಯಲ್ಲಿರುವ ಬಯೋ ಸಿಎನ್​ಜಿ ಘಟಕಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಘನ ತ್ಯಾಜ್ಯ ವಿಲೇವಾರಿ …

Leave a Reply

Your email address will not be published. Required fields are marked *