ಮೈಸೂರು: ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿಯಾಗಿದ್ದು, ಈ ವೇಳೆ ಭವಾನಿ ರೇವಣ್ಣ ಬೈಕ್ ಸವಾರನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ. ಬೈಕ್ ಸವಾರ ಶಿವಣ್ಣ ಎಂಬಾತ ಭವಾನಿ ರೇವಣ್ಣ ಅವರ KA-03-NK-5 ನಂಬರ್‌ನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ರೋಷವೇಷಗೊಂಡ ಭವಾನಿ ರೇವಣ್ಣ ಅವರು, ಬೋರ್ಡು ಗೀರ್ಡು ಏನು ಎಲ್ಲಾ ಡ್ಯಾಮೇಜ್ ಆಗಿದೆ. ಎಲ್ಲಿಗೆ ನುಗ್ಗುಸ್ತಿಯಾ ಮಧ್ಯದಲ್ಲಿ, ತೆಗೆದು ಸುಟ್ಟು ಹಾಕ್ರೋ ಈ ಬೇವರ್ಸಿ ಸೂಳೆಮಗನ ಗಾಡಿನಾ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಭವಾನಿ ರೇವಣ್ಣ ಸಾಲಿಗ್ರಾಮದಿಂದ ಹೊಳೆನರಸೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ರಾಂಪುರ ಗ್ರಾಮದ ಗೇಟ್‌ನಲ್ಲಿ ಈ ಘಟನೆ ನಡೆಸಿದೆ. ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ, ರೆಡಿ ಮಾಡಿಸುವುದು ಹೇಗೆ? ಎಂದು ಕೇಳುವ ಮೂಲಕ ಅವಾಜ್ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





