Breaking News

ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ….

ಬೆಂಗಳೂರು: ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ. ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ಪಂಚಾಯತ್‌ರಾಜ್ ಆಯುಕ್ತಾಲಯ ಸುತ್ತೋಲೆಯನ್ನು ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಕನಿಷ್ಠ ವೇತನದ ಕುರಿತು ಸುತ್ತೋಲೆ ಮೂಲಕ ಮಾಹಿತಿ ನೀಡಿದೆ. ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆ ದರಗಳ ಅನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸಬೇಕು ಎಂದು ಹೇಳಿದೆ.
ಯಾವುದೇ ಕಾರಣಕ್ಕೂ ಹೆಚ್ಚುವರಿ ಪಾವತಿ ಮಾಡಲು ಅವಕಾಶವಿಲ್ಲ. ಆದರೆ ನಿಯಮಾನುಸಾರ ನೇಮಕಗೊಂಡ ಸಿಬ್ಭಂದಿಗೆ ಪ್ರಸ್ತುತ ಪಾವತಿಸುತ್ತಿರುವ ವೇತನ ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನಕ್ಕಿಂತ ಹೆಚ್ಚಾಗಿದ್ದಲ್ಲಿ ಸದರಿ ವೇತನದಿಂದ ಸರ್ಕಾರ ಬಿಡುಗಡೆಗೊಳಿಸಿದ ಮೊತ್ತದಲ್ಲಿ ಕನಿಷ್ಠ ವೇತನ ಮಾತ್ರ ಪಾವತಿಸಬೇಕು ಎಂದು ತಿಳಿಸಲಾಗಿದೆ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *