Breaking News

ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ….

ಚಿಕ್ಕಮಗಳೂರು ನಗರದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಕೀಲರು ತೀರ್ಮಾನಿಸಿದ್ದಾರೆ.ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದಲ್ಲಿ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ನಡೆಯುತ್ತಿದೆ. ಹೆಲ್ಮೆಟ್ ಹಾಕದ ಕಾರಣ ಲಾಯರ್ ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ.
ಗುರುವಾರ ತಡರಾತ್ರಿ ವಕೀಲರು ಪ್ರತಿಭಟನೆ ನಡೆಸಿದಾಗ ಚಿಕ್ಕಮಗಳೂರು ಎಸ್ಪಿ ವಕೀಲರ ಪ್ರತಿಭಟನೆಗೆ ಮಣಿದು 6 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿದರು. ಪೊಲೀಸರನ್ನು ಬಂಧಿಸಬೇಕು ಎಂದು ವಕೀಲರು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರನ್ನು ಬಂಧಿಸಬಾರದು ಎಂದು ಪೊಲೀಸರು ಕುಟುಂಬದವರೊಂದಿಗೆ ಪ್ರತಿಭಟನೆ ನಡೆಸಿದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *