ದಸರಾ ಆನೆ ಅರ್ಜುನ ಸಾವು ಕನ್ನಡಿಗರನ್ನ ದುಃಖದ ಕಡಲಲ್ಲಿ ಮುಳುಗುವಂತೆ ಮಾಡಿದೆ. ಅದರಲ್ಲೂ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಬಗ್ಗೆ ಕನ್ನಡಿಗರು ಪ್ರೀತಿಯನ್ನ ಹೊಂದಿದ್ದರು. ನಿನ್ನೆ ಕಾಡಾನೆ ಜೊತೆ ಸೆಣೆಸಾಟ ನಡೆಸಿ, ಕನ್ನಡ ನಾಡಿನ ಜನರ ರಕ್ಷಣೆ ಮಾಡುವಾಗ ಅರ್ಜುನ ಮೃತಪಟ್ಟಿದ್ದಾನೆ. ಹೀಗಿದ್ದಾಗ ಮಾವುತರು, ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ’ ಎಂದು ಹಠ ಹಿಡಿದಿದ್ದಾರೆ.
ನಿನ್ನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು, ಬಾಳೆಕೆರೆ ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ನಡೆದಿತ್ತು. ಅರಣ್ಯ ಇಲಾಖೆಗೆ ಇದು ದೊಡ್ಡ ಸವಾಲಾಗಿತ್ತು. ಅರ್ಜುನ ಸೇರಿ 4 ಪಳಗಿದ ಆನೆ ಜೊತೆ ನಿನ್ನೆ ಕಾರ್ಯಾಚರಣೆ ಆರಂಭಿಸಿದ್ದರು ಅರಣ್ಯ ಇಲಾಖೆ ಸಿಬ್ಬಂದಿ. ಹೀಗಿದ್ದಾಗಲೇ ಆನೆ ಒಂದಕ್ಕೆ ಅರವಳಿಕೆ ಚುಚ್ಚು ಮದ್ದು ನೀಡುತ್ತಿದ್ದ ಸಮಯದಲ್ಲಿ ಅರ್ಜುನನ ಮೇಲೆ ಒಂಟಿ ಸಲಗ ಒಂದು ದಿಢೀರ್ ಅಟ್ಯಾಕ್ ಮಾಡಿತ್ತು. ಈ ದಾಳಿಯಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟ ನಂತರ ಆಕ್ರೋಶ ಕೂಡ ಭುಗಿಲೆದ್ದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





