Breaking News

ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾನುವಾರ ಚಾಮುಂಡಿಬೆಟ್ಟಕ್ಕೆ ದಂಪತಿ ಸಹಿತ ಭೇಟಿ….

ಮೈಸೂರು: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾನುವಾರ ಚಾಮುಂಡಿಬೆಟ್ಟಕ್ಕೆ ದಂಪತಿ ಸಹಿತ ಭೇಟಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಬೆಳಗ್ಗೆ ಪತ್ನಿ ಡಾ. ವಿಜೇತಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಹುಲ್ ದ್ರಾವಿಡ್ ತಾಯಿ ದರ್ಶನ ಪಡೆದರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ 19 ವರ್ಷದೊಳಗಿನವರ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯು ಉತ್ತರಾಖಂಡದ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸುಮಿತ್ ಕೂಡ ಕರ್ನಾಟಕದ ಪರ ಆಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಗ ಆಟ ಕಣ್ತುಂಬಿಕೊಳ್ಳಲು ರಾಹುಲ್ ದ್ರಾವಿಡ್ ಮೈಸೂರಿಗೆ ಆಗಮಿಸಿದ್ದುಘಿ, ಭಾನುವಾರ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *