ಬೆಳಗಾವಿ: ನಾನು ಹೇಳಿದ್ದರಲ್ಲಿ ತಪ್ಪು ಏನಿದೆ. ಮುಸ್ಲಿಂ ಸೇರಿದಂತೆ ಎಲ್ಲಾ ಸಮುದಾಯಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ದ ಅಂತ ನಾನು ಹೇಳಿರೋದು, ನೀವು ಅದಕ್ಕೆ ಉಪ್ಪು ಕಾರ ಹಾಕಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಗರಂ ಆಗಿದ್ದಾರೆ.ಈ ಕುರಿತು ಮಂಗಳವಾರ ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಮಾತನಾಡಿ ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.
ಇನ್ನೂ ಮುಸ್ಲೀಂ ಸಮುದಾಯಕ್ಕೆ ಅನುದಾನ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪ ಸಂಖ್ಯಾ ತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಮತ ಬ್ಯಾಂಕಿನ ರಾಜಕಾರಣ ಮತ್ತು ಮುಖ್ಯಮಂತ್ರಿ ಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





