ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಮೈದಾನಕ್ಕೆ ಇಳಿಯುವುದು ಖಚಿತವಾಗಿದೆ. 2023ರ ಐಪಿಎಲ್ ನಂತರ ನಿವೃತ್ತಿಯಾಗುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದ ಧೋನಿ, 2024ರ ಐಪಿಎಲ್‌ನಲ್ಲಿ ಆಡಲು ಸಜ್ಜಾಗುತ್ತಿದ್ದಾರೆ. ಮೊಣಕಾಲು ನೋವಿನ ನಡುವೆ ಕೂಡ ತಂಡವನ್ನು ಚಾಂಪಿಯನ್ ಮಾಡಿದ್ದ ಧೋನಿ, ನಂತರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಈಗ ಚೇತರಿಸಿಕೊಂಡಿರುವ ಅವರು 2024ರ ಐಪಿಎಲ್‌ಗೆ ಸಿದ್ಧತೆ ಆರಂಭಿಸಿದ್ದಾರೆ. ಅದಕ್ಕೂ ಮುನ್ನ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ.
ಎಂಎಸ್ ಧೋನಿ ತನಗೆ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಗಾಗಿ ಆಶೀರ್ವಾದ ಪಡೆಯಲು ಮಾ ಅಂಬೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಎಂಎಸ್ ಧೋನಿ ದೈವಭಕ್ತ ಎನ್ನುವುದ ಕಡಿಮೆ ಜನಕ್ಕೆ ತಿಳಿದಿದೆ, ತಮ್ಮ ವೈಯಕ್ತಿಕ ವಿಚಾರಗಳನ್ನು ಅಷ್ಟಾಗಿ ಬಹಿರಂಗಪಡಿಸದ ಧೋನಿ ಪ್ರಚಾರದಿಂದ ದೂರ ಉಳಿಯುತ್ತಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





